ಬೆಂಗಳೂರು: ‘ಮೇಕೆದಾಟು’ ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಭೇಟಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಎನ್‌ಸಿಪಿಸಿಆರ್) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಆಯೋಗವು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಪ್ರಕರಣದ ಸಂಬಂಧ ವಿಚಾರಣೆ ನಡೆಸಿ 7 ದಿನಗಳ ಒಳಗೆ ವರದಿ ನೀಡುವಂತೆಯೂ ನಿರ್ದೇಶಿಸಿದೆ. ಜೊತೆಗೆ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೊದ ಟ್ವಿಟರ್ ಲಿಂಕ್ ಅನ್ನೂ ಪತ್ರದಲ್ಲಿ ಉಲ್ಲೇಖಿಸಿದೆ.

ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಕುಳಿತು ಫೋಟೊ ತೆಗೆಸಿಕೊಂಡಿದ್ದರು. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಕುರಿತೂ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.