ಮಂಗಳವಾರ, ಜನವರಿ 18, 2022
16 °C

ಬೆಂಗಳೂರಿಗರಿಗೆ ಕೊರೊನಾ ಹಬ್ಬಿಸುವ ಜಾತ್ರೆಯೋ: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಭಾನುವಾರ ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ವಿಶ್ರಾಂತಿಗೆಂದು ತೆರಳಿದ್ದಾರೆ. 

ಈ ಕುರಿತು ರಾಜ್ಯ ಬಿಜೆಪಿ ಘಟಕವು ಟ್ವೀಟ್‌ ಮೂಲಕ ವ್ಯಂಗ್ಯವಾಡಿದೆ. ‘ಕಾಂಗ್ರೆಸ್ಸಿಗರೇ, ನಿಮ್ಮದು ಬೆಂಗಳೂರಿಗೆ ನೀರು ಕೊಡುವ ಯಾತ್ರೆಯೋ ಅಥವಾ ಬೆಂಗಳೂರಿಗರಿಗೆ ಕೊರೊನಾ ಹಬ್ಬಿಸುವ ಜಾತ್ರೆಯೋ’ ಎಂದು ಪ್ರಶ್ನಿಸಿದೆ.

‘ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜ್ವರದ ಲಕ್ಷಣದಿಂದ ಪಾದಯಾತ್ರೆಯಿಂದ ಹಿಂದೆ ಸರಿದಿದ್ದಾರೆ. ಇನ್ನೆಷ್ಟು ಜನರಿಗೆ ಕೋವಿಡ್ ಹಬ್ಬಿಸುವ ಯೋಜನೆ ಹಾಕಿಕೊಂಡಿದ್ದೀರಿ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಬೆಳಿಗ್ಗೆ 11.30ಕ್ಕೆ ಕಾರ್ಯಕರ್ತರೊಂದಿಗೆ ಸಂಗಮದಿಂದ ಪಾದಯಾತ್ರೆ ಆರಂಭಿಸಿದ ಸಿದ್ದರಾಮಯ್ಯ ಹೆಗ್ಗನೂರುವರೆಗೆ ಸುಮಾರು ಏಳು ಕಿ.ಮೀ. ಕ್ರಮಿಸಿದ್ದರು. ಆ ವೇಳೆ ಸಣ್ಣಗೆ ಜ್ವರ ಕಾಣಿಸಿಕೊಂಡ ಕಾರಣ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿದರು. ಸಂಜೆ ಅಲ್ಲಿಂದ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.

ಶನಿವಾರವಷ್ಟೇ ಸಿದ್ದರಾಮಯ್ಯ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದಿದ್ದು, ಇದರಿಂದ ಜ್ವರ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು