ರಾಮನಗರ: ಮೇಕೆದಾಟು ಪಾದಯಾತ್ರೆ ಹಿನ್ನೆಲೆಯಲ್ಲಿ ರಾಮನಗರ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ತುಮಕೂರು, ಮಂಡ್ಯ, ಚಾಮರಾಜನಗರ ಭಾಗದಿಂದಲೂ ಪೊಲೀಸರನ್ನು ಕರೆಯಿಸಿಕೊಳ್ಳಲಾಗಿದೆ.

ಮತ್ತೊಂದೆಡೆ ಪಾದಯಾತ್ರೆಗೆ ಕೈ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಶಾನ್ ಚಿತ್ರಮಂದಿರದ ಆವರಣದಲ್ಲಿ 3 ಸಾವಿರ ಮಂದಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ.

ಆದೇಶವಿಲ್ಲ:
ಪಾದಯಾತ್ರೆ ತಡೆಯುವಂತೆ ಇಲ್ಲವೇ ಕಾರ್ಯಕರ್ತರನ್ನು ಬಂಧಿಸುವಂತೆ ಸರ್ಕಾರದಿಂದ ಸದ್ಯದವರೆಗೆ ಯಾವುದೇ ಆದೇಶ ಬಂದಿಲ್ಲ. ಕೇವಲ ಸಂಚಾರ ಮಾರ್ಗಗಳನ್ನು ಬದಲಿಸಿದ್ದೇವೆ. ಪಾದಯಾತ್ರೆಗೆಂದು ಹೊರ ಜಿಲ್ಲೆಯಿಂದ ಬರುವವರಿಗೆ ರಾಮನಗರಕ್ಕೆ ಪ್ರವೇಶ ನೀಡುವುದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.

ಬೆಳಿಗ್ಗೆ 9ಕ್ಕೆ ಪಾದಯಾತ್ರೆ ಆರಂಭ ಆಗುವ ನಿರೀಕ್ಷೆ ಇದೆ. ಈ ದಿನ ರಾಮನಗರದಿಂದ ಬಿಡದಿವರೆಗೆ ನಡಿಗೆ ಕೈಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.