ಗುರುವಾರ , ಜನವರಿ 27, 2022
20 °C

ಇಂತಹ ಕೇಸ್‌ಗಳಿಗೆಲ್ಲ ನಾವು ಹೆದರುವುದಿಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ 64 ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಇಂತಹ ಕೇಸ್‌ಗಳಿಗೆಲ್ಲ ನಾವು ಹೆದರುವುದಿಲ್ಲ' ಎಂದು ಹೇಳಿದ್ದಾರೆ. 

ಇದನ್ನೂ ಓದಿ: 

ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ಸೋಮವಾರ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. 

'ನಾನು ಸೇರಿದಂತೆ ಪಕ್ಷದ ನಾಯಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ಕೇಸ್‌ಗಳಿಗೆಲ್ಲ ನಾವು ಹೆದರುವುದಿಲ್ಲ' ಎಂದು ಹೇಳಿದ್ದಾರೆ. 
 
'ಕೊರೊನಾ ನಿಯಮ ಉಲ್ಲಂಘಿಸಿದ ಮುಖ್ಯಮಂತ್ರಿಗಳು ಸೇರಿ ಬಿಜೆಪಿಯವರ ಮೇಲೂ ಏಕೆ ಪ್ರಕರಣ ದಾಖಲಿಸಿಲ್ಲ' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

'ಇದರಿಂದ ಸರ್ಕಾರದ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ. ಆದರೆ ಪಾದಯಾತ್ರೆ ಯಾರಿಂದಲೂ ತಡೆಯಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ. 
 

ಕಾಂಗ್ರೆಸ್‌ನ ನಾಯಕರ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಎಸ್. ರವಿ, ಧ್ರುವನಾರಾಯಣ ಜೊತೆಗೆ ಮೈಸೂರು ಭಾಗದ ನಾಯಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಮೊದಲಾದ ಮುಖಂಡರ ಮೇಲೂ ಎಫ್‌ಐಆರ್ ದಾಖಲಾಗಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು