ಬುಧವಾರ, ಜುಲೈ 6, 2022
21 °C

ಮೇಕೆದಾಟು: ಪರಿಷತ್‌ನಲ್ಲೂ ಒಮ್ಮತದ ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಾಕಿ ಇರುವ ಅನುಮತಿಗಳನ್ನು ತ್ವರಿತ ವಾಗಿ ನೀಡುವಂತೆ ಒತ್ತಾಯಿಸಿ ವಿಧಾನ ಪರಿಷತ್‌ನಲ್ಲೂ ಶುಕ್ರವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಯಿತು.

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡಿರುವ ನಿರ್ಣಯವನ್ನು ಖಂಡಿಸುವ ಹಾಗೂ ಕಾವೇರಿ ಕಣಿವೆಯಲ್ಲಿ ತಮಿಳುನಾಡು ಕೈಗೊಳ್ಳುತ್ತಿರುವ ಯೋಜನೆಗಳಿಗೆ ಅನುಮತಿ ನೀಡದಂತೆ ಆಗ್ರಹಿಸುವ ಅಂಶಗಳೂ ನಿರ್ಣಯದಲ್ಲಿವೆ.

ಕರ್ನಾಟಕದ ಒಪ್ಪಿಗೆ ಇಲ್ಲದೆ ನದಿ ಜೋಡಣೆ ಯೋಜನೆಯನ್ನು ಅಂತಿಮಗೊಳಿಸಬಾರದು ಮತ್ತು ಸದ್ಯ ರೂಪಿಸಿರುವ ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡಬಾರದು ಎಂಬ ಆಗ್ರಹವೂ ನಿರ್ಣಯದಲ್ಲಿದೆ.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ನಿರ್ಣಯ ಮಂಡಿಸಿ ದರು. ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ನಿರ್ಣಯವನ್ನು ಬೆಂಬಲಿಸಿದರು. ಬಳಿಕ ಧ್ವನಿಮತದ ಮೂಲಕ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು