ಮೇಕೆದಾಟು: ರಾಜ್ಯದ ಪರ ಎನ್‌ಜಿಟಿ ಆದೇಶ

ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿಲ್ಲ ಹಾಗೂ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಮಾಡಿಲ್ಲವೆಂದು ರಾಷ್ಟ್ರೀಯ ಹಸಿರು ಪೀಠಕ್ಕೆ (ಎನ್‌ಜಿಟಿ) ಸರ್ಕಾರ ಮನವರಿಕೆ ಮಾಡಿಕೊಟ್ಟಿದ್ದರಿಂದಾಗಿ, ರಾಜ್ಯದ ಪರವಾಗಿ ಪೀಠ ಆದೇಶ ನೀಡಿದೆ ಎಂದು ಕಾನೂನು ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಚೆನ್ನೈನಲ್ಲಿರುವ ಎನ್‌ಜಿಟಿ ಪೀಠವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಣಾ ಪ್ರಕರಣ ದಾಖಲಿಸಿಕೊಂಡಿತ್ತು. ಈ ಕುರಿತು ಕಾನೂನು ಇಲಾಖೆ, ಅಡ್ವೋಕೇಟ್ ಜನರಲ್ ಹಾಗೂ ಕಾನೂನು ತಜ್ಞರ ತಂಡ ಕೂಲಂಕಶ ಚರ್ಚೆ ಮಾಡಿತ್ತಲ್ಲದೇ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಇದನ್ನು ನವದೆಹಲಿಯ ಎನ್‌ಜಿಟಿ ಪೀಠದ ಮುಂದೆ ಮಂಡಿಸಲಾಯಿತು ಎಂದು ಅವರು ಹೇಳಿದ್ದಾರೆ.
ನೆಲ-ಜಲದ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ತೆಗೆದುಕೊಂಡು, ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಂಡು ಬಂದಿದೆ. ಮೇಕೆದಾಟು ವಿಷಯದಲ್ಲಿ ಕರ್ನಾಟಕ ಕುರಿತಾದ ಒಂದು ಮುಖ್ಯ ಪ್ರಕರಣ ಸುಪ್ರೀಂಕೋರ್ಟಿನಲ್ಲಿದೆ. ಅಲ್ಲಿ ಕೂಡ ಕರ್ನಾಟಕದ ಹಿತಾಸಕ್ತಿ ಕಾಪಾಡುವ ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.