ಯಡಿಯೂರಪ್ಪ ವಿರುದ್ಧದ ದೂರು ವಾಪಸ್ ಪಡೆಯಲು ಮೆಮೊ

ಬೆಂಗಳೂರು: ಮಠದಹಳ್ಳಿ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಂಡಿದ್ದ ಜಮೀನು ಡಿ–ನೋಟಿಫಿಕೇಷನ್ ಮಾಡಿದ್ದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಿಸಿರುವ ದೂರು ಹಿಂಪಡೆಯಲಾಗುವುದು ಎಂದು ಹೈಕೋರ್ಟ್‌ಗೆ ದೂರುದಾರರು ಮೊಮೊ ಸಲ್ಲಿಸಿದರು.
1 ಎಕರೆ 10 ಗುಂಟೆ ಜಮೀನು ಡಿನೋಟಿಫಿಕೇಷನ್ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ 2017ರಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ದೂರುದಾರ ಜಯಕುಮಾರ್ ಹಿರೇಮಠ್ ಪರ ವಕೀಲರು ಹಾಜರಾಗಿ, ಲೋಕಾಯುಕ್ತ ಪೊಲೀಸರಿಗೆ ದೂರು ದಾಖಲಿಸುವ ಮುನ್ನ ಪೂವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ಹಿಂಪಡೆಯಲು ಅನುಮತಿ ನೀಡುವಂತೆ ಕೋರಿ ಮೆಮೊ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಡಿ.11ರಂದು ದೂರುದಾರರು ಖುದ್ದು ಹಾಜರಾಗಿ ಈ ಕುರಿತು ವಿವರಣೆ ನೀಡಬೇಕು’ ಎಂದು ಅಭಿಪ್ರಾಯಪಟ್ಟಿತು.
ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆಯನ್ನು 1977ರಲ್ಲಿ ಬಿಡಿಎ ಅಭಿವೃದ್ಧಿಪಡಿಸಿತ್ತು. 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಡಿ–ನೋಟಿಫೈ ಮಾಡಿದ್ದಾರೆ ಎಂದು ಜಯಕುಮಾರ್ ಹಿರೇಮಠ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.