ಶುಕ್ರವಾರ, ಫೆಬ್ರವರಿ 3, 2023
25 °C

ಬೆಳಗಾವಿಯಲ್ಲಿ ಮರಾಠಿಗರ ಮಹಾಮೇಳ, ಪ್ರಮುಖ ನಾಯಕರಿಗೆ ಆಹ್ವಾನ: ಎಂಇಎಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ವ್ಯಾಕ್ಸಿನ್‌ ಡಿಪೊದಲ್ಲಿ ಡಿ. 19ರಂದು ಮರಾಠಿಗರ ಮಹಾಮೇಳ ಆಯೋಜಿಸಲಾಗಿದ್ದು, ಇದಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳ ಪ್ರಮುಖ ನಾಯಕರೂ ಭಾಗವಹಿಸಬೇಕು ಎಂದು ಕೋರಿ ಎಂಇಎಸ್‌ ಮುಖಂಡರು ಗುರುವಾರ ಪತ್ರ ಬರೆದಿದ್ದಾರೆ.

ಡಿ.19ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಇದಕ್ಕೆ ವಿರುದ್ಧವಾಗಿ ‘ಮಹಾ ಮೇಳಾವ್‌’ ನಡೆಸಲು ಉದ್ದೇಶಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಸಂಕ್ಷಿಪ್ತವಾಗಿ ಆಯೋಜಿಸಿದ ಈ ಸಮಾವೇಶವನ್ನು ಈ ಬಾರಿ ಬೃಹದ್ದಾಗಿ ಆಯೋಜನೆ ಮಾಡಲು ಸಿದ್ಧತೆ ನಡೆದಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್‌ ದೇಸಾಯಿ, ಹಿರಿಯ ಮುಖಂಡರಾದ ಶರದ್‌ ಪವಾರ್‌, ಉದ್ಧವ್‌ ಠಾಕ್ರೆ, ರಾಜ್ ಠಾಕ್ರೆ ಸೇರಿದಂತೆ ಬಿಜೆಪಿ, ಕಾಂಗ್ರೆಸ್‌, ಶಿವಸೇನೆ, ರಾಷ್ಟ್ರವಾದಿ ಕಾಂಗ್ರೆಸ್‌ನ ನಾಯಕರಿಗೂ ಸ್ಥಳೀಯ ಮುಖಂಡರು ಪತ್ರ ಬರೆದಿದ್ದಾರೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು