ಸೋಮವಾರ, ಅಕ್ಟೋಬರ್ 25, 2021
25 °C

ಉತ್ತರ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಸೆ.21 ಮತ್ತು ಸೆ.22ರಂದು ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರ್ಗಿ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಲ್ಲಿ ಪ್ರಸ್ತುತ ಮಳೆಯಾಗುವ ಯಾವ ಸೂಚನೆಯೂ ಇಲ್ಲ. ರಾಜ್ಯದ ಒಳನಾಡಿನಲ್ಲಿ ಮಾತ್ರ ಅಲ್ಲಲ್ಲಿ ಹೆಚ್ಚು ಮಳೆಯಾಗಬಹುದು ಎಂದು ತಿಳಿಸಿದೆ.

ಮಳೆ–ಎಲ್ಲಿ, ಎಷ್ಟು?: ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಸೋಮವಾರ ಗರಿಷ್ಠ 7 ಸೆಂಟಿ ಮೀಟರ್‌ ಮಳೆ ದಾಖಲಾಗಿದೆ. ಕೆಜಿಎಫ್‌ 6, ಮುಳಬಾಗಿಲು 6, ಬೆಂಗಳೂರು ನಗರ, ಬೆಂಗಳೂರು ಎಚ್‌ಎಎಲ್‌ನಲ್ಲಿ ತಲಾ 3, ಕೆ.ಆರ್‌.ಪೇಟೆ, ಕೋಲಾರದಲ್ಲಿ ತಲಾ 2, ಬೆಂಗಳೂರು ವಿಮಾನ ನಿಲ್ದಾಣ, ಮಾಲೂರಿನಲ್ಲಿ ತಲಾ 1 ಸೆಂಟಿ ಮೀಟರ್‌ ಮಳೆಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು