ಬೆಂಗಳೂರು: ‘ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ದುಡಿಯವ ಕಾರ್ಮಿಕರಿಗೆ ಕೂಲಿ ಪಾವತಿಸಲು ವಿಳಂಬ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
‘ರಾಜ್ಯದಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂಬ ಸರ್ಕಾರದ ಪರ ವಕೀಲರ ವಾದವನ್ನು ಮನ್ನಿಸಿದ ನ್ಯಾಯಪೀಠ, ‘ವೇತನ ನೀಡಲು ವಿಳಂಬವಾದಲ್ಲಿ ದೂರು ನೀಡುವ ವ್ಯವಸ್ಥೆ ಇರುವಾಗ, ಯಾರಿಗಾದರೂ ವೈಯಕ್ತಿಕವಾಗಿ ತೊಂದರೆ ಆದಲ್ಲಿ ದೂರು ನೀಡಬಹುದು’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.