ಶುಕ್ರವಾರ, ಜೂನ್ 18, 2021
27 °C

ಎಂ ನರೇಗಾ ಕಾಮಗಾರಿಗೆ ಒಪ್ಪಿಗೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಕರ್ಫ್ಯೂ ಜಾರಿಯಲ್ಲಿದ್ದು, ಕೆಲವೇ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ ಲಾಕ್‌ಡೌನ್ ನಿಯಮದಲ್ಲಿ ಸರ್ಕಾರ ಕೆಲವೊಂದು ಬದಲಾವಣೆ ಮಾಡಿದ್ದು, ಎಂ ನರೇಗಾ ಕಾಮಗಾರಿಗೆ ಒಪ್ಪಿಗೆ ನೀಡಿದೆ. ರಾಜ್ಯದಲ್ಲಿ ಕಾರ್ಮಿಕರು ಎಂ ನರೇಗಾ ಕಾಮಗಾರಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. 

ಆದರೆ, ಕೋವಿಡ್‌ ನಿಯಮಗಳನ್ನು ಪಾಲಿಸುವ ಜತೆಗೆ ಒಂದು ಕಡೆ 40ಕ್ಕಿಂತ ಹೆಚ್ಚು ಕಾರ್ಮಿಕರು ಇರದಂತೆ  ನೋಡಿಕೊಳ್ಳಬೇಕೆಂಬ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ.

ಉಳಿದಂತೆ, ಕೆಲಸದ ಸ್ಥಳದಲ್ಲಿ ಪಾಲಿಸಬೇಕಾದ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು