ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರಗಂಗಾ ನಿಗಮದ ಮೂಲಕ ಸೂಕ್ಷ್ಮ ನೀರಾವರಿ: ಸಚಿವರ ಸಲಹೆ

Last Updated 4 ಸೆಪ್ಟೆಂಬರ್ 2020, 21:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ‘ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ’ದ ಮೂಲಕ ಅನುಷ್ಠಾನ ಮಾಡುವುದು ಸೂಕ್ತ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸಲಹೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ ಅವರು ಈ ವಿಷಯ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ನಾರಾಯಣಗೌಡ ಅವರು, ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಹಸ್ತಾಂತರಿಸುವ ಬಗ್ಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ಹೇಳಿದರು.

ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಲ್ಲಿ ಅನುಷ್ಠಾನ ಮಾಡುತ್ತಿರುವ ಸೂಕ್ಷ್ಮ ನೀರಾವರಿ ಯೋಜನೆಗಳಿಗಾಗಿ ಏಕಗವಾಕ್ಷಿ ಮಾದರಿಯಲ್ಲಿ ನಿಗಮ ಸ್ಥಾಪಿಸಲಾಗಿದೆ. ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲು ಈ ಯೋಜನೆಗಳನ್ನು ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮದ ಮೂಲಕ ಜಾರಿ ತರುವುದು ಸೂಕ್ತ ಎಂದು ಪಾಟೀಲ ಅಭಿಪ್ರಾಯಪಟ್ಟರು.

2019–20 ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 3,15,812 ಕ್ವಿಂಟಲ್‌ ತೊಗರಿಯನ್ನು ರೈತರಿಂದ ನೇರವಾಗಿ ಖರೀದಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT