ಶುಕ್ರವಾರ, ಡಿಸೆಂಬರ್ 3, 2021
24 °C

21ರಿಂದ ಬಿಸಿಯೂಟ, ಭಾನುವಾರ ತರಗತಿ ಮರುಪರಿಶೀಲಿಸಿ: ಪ್ರಾಥಮಿಕ ಶಾಲಾ ಶಿಕ್ಷಕರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಲೆಗಳಲ್ಲಿ ಇದೇ 21ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸುವ ಮತ್ತು ಭಾನುವಾರ ಕೂಡಾ  ಶಾಲೆಗಳನ್ನು ನಡೆಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಸಲ್ಲಿಸಿದೆ.

ದಸರಾ ರಜಾ ಅವಧಿ ಮುಗಿದು ಇದೇ 21ರಿಂದ ಶಾಲೆಗಳು ಮತ್ತೆ ಆರಂಭಗೊಳ್ಳುತ್ತಿದೆ. ಅದೇ ದಿನದಿಂದ ಬಿಸಿಯೂಟ ಆರಂಭಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಬಿಸಿಯೂಟ ತಯಾರಿಸಲು ಶಾಲೆಗಳಲ್ಲಿ ರೇಷನ್‌, ಗ್ಯಾಸ್‌ ಸಿಲಿಂಡರ್‌ ಮತ್ತಿತ್ತರ ಸಿದ್ಧತೆ ಆಗಿಲ್ಲ. ಬಿಸಿಯೂಟ ತಯಾರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಶಾಲೆಗಳು ಆರಂಭವಾದ ನಾಲ್ಕುದಿನಗಳ ಬಳಿಕ ಬಿಸಿಯೂಟ ಆರಂಭಿಸಬೇಕು ಎಂದು ಸಂಘ ಮನವಿ ಮಾಡಿದೆ.

ಓದಿ: 

ಕೋವಿಡ್‌ ಸಂದರ್ಭದಲ್ಲೂ ಶಿಕ್ಷಕರು ಆನ್‌ಲೈನ್‌, ಆಫ್‌ಲೈನ್‌ ತರಗತಿ, ವಿದ್ಯಾಗಮ, ವಠಾರ ಶಾಲೆ, ಕೋವಿಡ್‌ ಕರ್ತವ್ಯ, ಚೆಕ್‌ಪೋಸ್ಟ್‌ ಕೆಲಸ ನಿರ್ವಹಿಸಿದ್ದಾರೆ. ಹೀಗೆ ಶಿಕ್ಷಕರು ನಿರಂತರವಾಗಿ ಕೆಲಸದಲ್ಲಿ ತೊಡಗಿದ್ದಾರೆ. ಮಕ್ಕಳ ಮಾಸಿಕ ದೃಷ್ಟಿಕೋನ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಭಾನುವಾರ ತರಗತಿ ನಡೆಸುವುದ ನಿರ್ಧಾರವನ್ನು ಕೈಬಿಡಬೇಕು ಎಂದು ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು