ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಮಾರಾಟದ ಅವಧಿ ವಿಸ್ತರಣೆ: ಪರಿಷ್ಕೃತ ಆದೇಶ ಪ್ರಕಟ

Last Updated 29 ಏಪ್ರಿಲ್ 2021, 16:44 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳನ್ನು ರಾತ್ರಿ 8 ಗಂಟೆಯವರೆಗೂ ತೆರೆಯಲು ಅವಕಾಶ ಕಲ್ಪಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.

ಹಾಲಿನ ಮಳಿಗೆಗಳನ್ನು ಕೂಡ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆಯುವಂತೆ ಏಪ್ರಿಲ್‌ 26ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.

ಗುರುವಾರ ಪರಿಷ್ಕೃತ ಆದೇಶ ಹೊರಡಿಸಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ‘ಹಾಲಿನ ಮಳಿಗೆಗಳು ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೂ ಮಾರಾಟ ಮಾಡಬಹುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT