ಸೋಮವಾರ, ಆಗಸ್ಟ್ 2, 2021
23 °C

ಅಂಗನವಾಡಿ ಮಕ್ಕಳ ಹಾಲಿನ ಪುಡಿ ಅಕ್ರಮ: ಸಿಐಡಿಗೆ ತನಿಖೆ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲೆಯಲ್ಲಿ ವರ್ಷದ ಹಿಂದೆ ಪತ್ತೆಯಾಗಿದ್ದ, ಅಂಗನವಾಡಿಗಳಿಗೆ ಪೂರೈಸುವ ಹಾಲಿನ ಪುಡಿಯ ಅಕ್ರಮ ಸಂಗ್ರಹಣೆ ಹಾಗೂ ಮಾರಾಟ ಪ್ರಕರಣದ ತನಿಖೆಯನ್ನು ಸರ್ಕಾರ ಮಂಗಳವಾರ ಸಿಐಡಿಗೆ ವರ್ಗಾಯಿಸಿ ಆದೇಶಿಸಿದೆ.

ಕ್ಷೀರಭಾಗ್ಯ ಯೋಜನೆಯಡಿ ಪೂರೈಸುವ ಹಾಲಿನಪುಡಿಯನ್ನು ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಹೋಟೆಲ್‌ಗಳಿಗೆ ಮಾರುವ ದೊಡ್ಡ ಜಾಲ ಸಕ್ರಿಯವಾಗಿದೆ. ಸಮಗ್ರ ತನಿಖೆಗಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಹಾಲಿನ ಪುಡಿ ಅಕ್ರಮ ಮಾರಾಟ ಜಾಲ ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಗಷ್ಟೇ ಸೀಮಿತವಾಗಿಲ್ಲ. ಬೀದರ್, ಕಲಬುರ್ಗಿ ಸೇರಿ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ವಿಸ್ತೃತ ತನಿಖೆ ಅಗತ್ಯ ಎಂಬ ಕಾರಣಕ್ಕೆ ಸಿಐಡಿಗೆ ತನಿಖೆ ಹೊಣೆ ವಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಆದೇಶದ ಪ್ರತಿ ’ಪ್ರಜಾವಾಣಿ‘ಗೆ ಲಭ್ಯವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು