ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿಯ ಕೊಳೆತ ಕಾಲಿನ ಭಾಗ ಪತ್ನಿ ಕೈಗಿಟ್ಟ ಮಿಮ್ಸ್ ಸಿಬ್ಬಂದಿ

ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಘಟನೆ
Last Updated 6 ಸೆಪ್ಟೆಂಬರ್ 2022, 22:28 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ಕೀಲಾರ ಗ್ರಾಮದ ಪ್ರಕಾಶ್ ಎಂಬುವವರ ಕೊಳೆತ ಕಾಲಿನ ಭಾಗವನ್ನು ನಗರದ ಮಿಮ್ಸ್‌ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ತೆಗೆದು, ಅವರ ಪತ್ನಿ ಭಾಗ್ಯಮ್ಮ ಅವರಿಗೆ ಕೊಟ್ಟು ಮಣ್ಣು ಮಾಡುವಂತೆ ಸೂಚಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ಯಾಂಗ್ರೀನ್‌ನಿಂದ ಬಳಲುತ್ತಿದ್ದ ಪ್ರಕಾಶ್‌ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಪೂರ್ಣ ಕೊಳೆತಿದ್ದರಿಂದ ಮಂಗಳವಾರ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಕಾಲು ಕತ್ತರಿಸಿದ್ದರು. ನಂತರ ಅದನ್ನು ನಿಯಮಾನುಸಾರ ವಿಲೇವಾರಿ ಮಾಡದೆ, ಭಾಗ್ಯಮ್ಮ ಅವರಿಗೆ ನೀಡಿದ್ದರು.

ಅದರಿಂದ ಆಘಾತಕ್ಕೆ ಒಳಗಾದ ಭಾಗ್ಯಮ್ಮ ಆಸ್ಪತ್ರೆ ಮುಂಭಾಗ, ಗಂಡನ ಕತ್ತರಿಸಿದ ಕಾಲನ್ನು ಹಿಡಿದು ಕಣ್ಣೀರು ಹಾಕುತ್ತಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಮಿಮ್ಸ್ ನಿರ್ದೇಶಕ ಡಾ.ಮಹೇಂದ್ರ, ‘ರೋಗಿಯ ಮೊಣಕಾಲಿನ ಕೆಳ ಭಾಗವನ್ನು ತೆಗೆಯಲಾಗಿತ್ತು. ಅದನ್ನು ಡಿ ದರ್ಜೆ ನೌಕರರು ರೋಗಿಯ ಸಂಬಂಧಿಕರಿಗೆ ಕೊಟ್ಟಿದ್ದಾರೆ. ವಿಷಯ ಗಮನಕ್ಕೆ ಬಂದ ಕೂಡಲೇ, ಅದನ್ನು ವಾಪಸ್ ಪಡೆಯಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT