ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೀಟರ್‌ ಹಾಲಿಗೆ ₹ 40 ಕನಿಷ್ಠ ದರ: ಭಾರತೀಯ ಕಿಸಾನ್‌ ಸಂಘ ಒತ್ತಾಯ

Last Updated 11 ಜನವರಿ 2022, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಲಾಭದಾಯಕ ದರ ಹಾಗೂ ಪ್ರತಿ ಲೀಟರ್‌ ಹಾಲು ಖರೀದಿಗೆ ಕನಿಷ್ಠ ₹ 40 ದರ ನಿಗದಿಪಡಿಸುವುದೂ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಭಾರತೀಯ ಕಿಸಾನ್‌ ಸಂಘವುಒತ್ತಾಯಿಸಿದೆ.

ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ಸಂಘದ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು.

ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರರಾಷ್ಟ್ರಪತಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ
ವನ್ನುಸಂಘಟನೆಯು ರಾಜ್ಯದಾದ್ಯಂತ ಹಮ್ಮಿಕೊಂಡಿತ್ತು.

‘ಮಳೆಯಿಂದ ಕೊಚ್ಚಿ ಹೋಗಿರುವಕೃಷಿ ಜಮೀನುಗಳಿಗೆ ಹೋಗುವ ದಾರಿಗಳನ್ನು ಸರಿಪಡಿಸಲು ಸರ್ಕಾರ ಹಣ ಮಂಜೂರು ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲ ರೈತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ₹10 ಲಕ್ಷಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು’ ಎಂದು ಸಂಘದ ಬೆಂಗಳೂರು ಘಟಕದ ಅಧ್ಯಕ್ಷಪಂಪಣ್ಣ ಆಗ್ರಹಿಸಿದರು. ‘ಬಗರ್‌ಹುಕುಂ ಸಾಗುವಳಿ ಸಕ್ರಮ ಯೋಜನೆ
ಯಡಿ ಮಂಜೂರಾದ ಭೂಮಿಗೆ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸಬೇಕು. ರೈತರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ ನೀಡಬೇಕು. ಕೋವಿಡ್‌ನಿಂದ ನಷ್ಟಕ್ಕೆ ಸಿಲುಕಿರುವ ರೈತರಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT