ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 18 ಸಾವಿರ ಕೋಟಿ ಬಳಕೆಗೆ ನೆರವು ಬೇಕು: ನಿರಾಣಿ ಮನವಿ

Last Updated 13 ಫೆಬ್ರುವರಿ 2021, 19:48 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ ಸಂಗ್ರಹಿಸಿರುವ ಸುಮಾರು ₹ 18 ಸಾವಿರ ಕೋಟಿಯನ್ನು ಕರ್ನಾಟಕಕ್ಕೆ ನೀಡುವ ನಿಟ್ಟಿನಲ್ಲಿ ಕಾನೂನು ಮತ್ತು ಆಡಳಿತಾತ್ಮಕ ನೆರವು ನೀಡಬೇಕು’ ಎಂದು ಒತ್ತಾಯಿಸಿ ಕೇಂದ್ರ ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರಿಗೆ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಜೋಶಿ ಅವರನ್ನು ಶನಿವಾರ ಭೇಟಿ ಮಾಡಿದ ನಿರಾಣಿ, ಗಣಿಗಾರಿಕೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳ ಅಭಿ
ವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ₹ 18 ಸಾವಿರ ಕೋಟಿಯಲ್ಲಿ ರೂಪುರೇಷೆ ಸಿದ್ಧಪಡಿಸುವ ಕುರಿತಂತೆ ಚರ್ಚಿಸಿದರು.

ನಿಧಿ ಬಳಕೆಗೆ ಕೋರ್ಟ್‌ ಅನುಮತಿ ನೀಡಿದರೆ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ ಮತ್ತು ತುಮಕೂರು ಸೇರಿದಂತೆ ಗಣಿಗಾರಿಕೆ ನಡೆಯುವ ಪ್ರದೇಶಗಳ ಜನರಿಗೆ ಪುನರ್‌ವಸತಿಗೆ ಅವಕಾಶ ನೀಡುವ ಬಗ್ಗೆಯೂ ನಿರಾಣಿ ವಿವರಿಸಿದರು.

‘ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ನಿಧಿ ಅಡಿ ₹ 2,200 ಕೋಟಿ ಸಂಗ್ರಹವಾಗಿದೆ. ಈ ಹಣದಿಂದಲೂ ವಿವಿಧ ರೀತಿಯ ಸಮಾಜಮುಖಿ ಕೆಲಸಗಳನ್ನು ಕೈಗೊಳ್ಳಬಹುದು. ಕೇಂದ್ರ ಸರ್ಕಾರ ನಮಗೆ ಅಗತ್ಯವಾದ ನೆರವು ನೀಡಬೇಕು’ ಎಂದು ನಿರಾಣಿ ಒತ್ತಾಯಿಸಿದರು. ರಾಜ್ಯದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗಣಿಗಾರಿಕೆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಕೂಡ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕೂಡಾ ನಿರಾಣಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT