ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್ ಎಸ್ ಸುತ್ತಲಿನ ಗಣಿಗಾರಿಕೆ ನಾಲ್ಕು ತಿಂಗಳ ಹಿಂದೆಯೇ ಬಂದ್: ನಿರಾಣಿ

Last Updated 10 ಜುಲೈ 2021, 5:55 IST
ಅಕ್ಷರ ಗಾತ್ರ

ಕಲಬುರ್ಗಿ: 'ಕೃಷ್ಣ ರಾಜ ಸಾಗರ ಜಲಾಶಯದ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ನಾಲ್ಕು ತಿಂಗಳ ಹಿಂದೆಯೇ ಗಣಿಗಾರಿಕೆ ಬಂದ್ ಮಾಡಲಾಗಿದೆ' ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ‌ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೆಆರ್ ಎಸ್ ಡ್ಯಾಂ ಸುತ್ತಲಿನ ಹತ್ತು ಕಿ.ಮೀ. ದೂರದಲ್ಲಿರುವ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ. ಹತ್ತು ಕಿ.‌ಮೀಟರ್ ದೂರದ ಆಚೆಗೆ ಗಣಿಗಾರಿಕೆಗೆ ಅನುಮತಿ ನೀಡಿದ್ದೇವೆ' ಎಂದು ಸ್ಪಷ್ಟಪಡಿಸಿದರು.

ಪ್ರವಾಹ ಎದುರಿಸಲು ಅಗತ್ಯ ಸಿದ್ಧತೆ:ಜಿಲ್ಲೆಯಲ್ಲಿ ಮುಂದಿನ ಏಳು ದಿನಗಳವರೆಗೆ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಪ್ರವಾಹ ಬಂದರೆ ಬೋಟ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ‌ಮುರುಗೇಶ ನಿರಾಣಿ ತಿಳಿಸಿದರು.

'ಪ್ರವಾಹ ಬಂದರೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜೊತೆಗೆ ಕಾರವಾರದಿಂದ ಬೋಟ್ ತರಿಸುವುದಕ್ಕೆ ತೀರ್ಮಾನಿಸಲಾಗಿದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರವಾಹ ಬಂದ ಸಂದರ್ಭದಲ್ಲಿ ಜನರನ್ನ ಬೇರೆಡೆ ಸ್ಥಳಾಂತರಿಸಲು ಯೋಜಿಸಲಾಗಿದೆ. ದನ ಕರುಗಳಿಗೆ ಮೇವಿನ ವ್ಯವಸ್ಥೆ ಮಾಡಲಾಗುವುದು. ಮಹಾರಾಷ್ಟ್ರದ ವಿವಿಧ ಅಣೆಕಟ್ಟೆಗಳಿಂದ ನೀರು ಹರಿಸುವುದರ ಬಗ್ಗೆ ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT