ಗುರುವಾರ , ಮಾರ್ಚ್ 23, 2023
30 °C

ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ ಘೋಷಣೆ: ಸಚಿವ ಈಶ್ವರಪ್ಪ ಲೇವಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಇಳಿಯಬಾರದಿತ್ತು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಬೆಂಬಲಿಗ ಶಾಸಕರ ಬಾಯಿ ಮುಚ್ಚಿಸಲು ಸಿದ್ದರಾಮಯ್ಯ ಮುಂದಾಗಿಲ್ಲ. ಡಿ.ಕೆ. ಶಿವಕುಮಾರ್‌ ಕೂಡಾ ಯಾರ ಬಾಯಿಯನ್ನೂ ಮುಚ್ಚಿಸಿಲ್ಲ. ಎಂ.ಬಿ. ಪಾಟೀಲ ನಾನು ಸನ್ಯಾಸಿ ಅಲ್ಲ ಅಂತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಜಿ. ಪರಮೇಶ್ವರ, ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತನ್ವೀರ್ ಸೇಠ್ ಹೇಳುತ್ತಿದ್ದಾರೆ. ಭಾವಿ ಮುಖ್ಯಮಂತ್ರಿ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಬಡಿದಾಟ ನಡೆಯುತ್ತಿದೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು