ಬುಧವಾರ, ಫೆಬ್ರವರಿ 8, 2023
16 °C

ಗೋಪಾಲಯ್ಯರನ್ನು ಬದಲಿಸಿ ಮಂಡ್ಯ ಉಸ್ತುವಾರಿ ಸಚಿವರಾಗಿ ಸಚಿವ ಅಶೋಕ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರನ್ನು ದಿಢೀರ್‌ ಬದಲಿಸಿ, ಆ ಸ್ಥಾನಕ್ಕೆ ಕಂದಾಯ ಸಚಿವ ಕೆ. ಅಶೋಕ ಅವರನ್ನು ನೇಮಿಸಲಾಗಿದೆ.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿ ಗರ ಪ್ರಾಬಲ್ಯವಿದೆ. ಗೋಪಾಲಯ್ಯ ಜೆಡಿಎಸ್‌ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂಬ ಕೋಪ ಈ ಭಾಗ ದಲ್ಲಿ‌ ದಟ್ಟವಾಗಿದೆ. ಹೀಗಾಗಿ, ಅವರನ್ನೇ ಮುಂದುವರಿಸಿದರೆ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಬಹುದು ಎಂಬ
ಕಾರಣಕ್ಕೆ ಮುಖ್ಯಮಂತ್ರಿ ಈ ಬದಲಾವಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಈ ಹಿಂದೆ 2 ಬಾರಿ ಅಶೋಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು