ಸೋಮವಾರ, ಸೆಪ್ಟೆಂಬರ್ 26, 2022
20 °C

ಹುಳುಕು ಹುಡುಕುವುದೇ ಕಾಂಗ್ರೆಸ್‌ ಮನಸ್ಥಿತಿ: ಬಿ.ಸಿ.ನಾಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಪ್ರತಿಯೊಂದರಲ್ಲೂ ಹುಳುಕು ಹುಡುಕುವುದು ಕಾಂಗ್ರೆಸ್‌ನವರ ಮಾನಸಿಕ ಸ್ಥಿತಿಯಾಗಿದೆ’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಸಮರ್ಥ ವಿರೋಧ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ. ನೆಹರೂ ಭಾವಚಿತ್ರದ ವಿಷಯ ಆಧರಿಸಿ ರಾಜಕೀಯ ಮಾಡುತ್ತಿದೆ’ ಎಂದರು.

‘ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಶೇ 60ರಿಂದ 70ರಷ್ಟು ಜನರು ಸ್ವತಃ ತಮ್ಮ ಮನೆಗಳ ಮುಂದೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಇದರಿಂದ ದೇಶಕ್ಕೆ ಭವಿಷ್ಯ ಇದೆ ಎಂದೆನಿಸುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು