ಶುಕ್ರವಾರ, ಏಪ್ರಿಲ್ 16, 2021
31 °C

ಕುಮಾರಸ್ವಾಮಿ ಇಸ್ಪೀಟ್, ಗ್ಯಾಂಬ್ಲಿಂಗ್ ಆಡಿದ ಫೋಟೊ ನನ್ನ ಬಳಿ ಇದೆ: ಯೋಗೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ನಂಬಿಕೆಗೆ ಅರ್ಹರಲ್ಲ. ಅವರೊಂದಿಗೆ ಯಾವುದೇ ಹೊಂದಾಣಿಕೆ ಮಾಡುವುದು ಬೇಡ’ ಎಂದು ಬಿಜೆಪಿ ಹಿರಿಯರಿಗೆ ಮನವಿ ಮಾಡಿದ್ದೇನೆ’ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿಯವರು ವಿಧಾನಪರಿಷತ್‌ನಲ್ಲಿ ಬಿಜೆಪಿಯೊಂದಿಗೆ ಸೇರಿ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಮಾಡಿದರು. ಆದರೆ, ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದರು. ಹೀಗಾಗಿ, ಅವರನ್ನು ನಂಬಬೇಡಿ ಎಂದು ನಮ್ಮ ಪಕ್ಷದವರಿಗೆ ಹೇಳುತ್ತೇನೆ. ಇದರಿಂದ ನಮ್ಮ ಪಕ್ಷದ ಬೆಳವಣಿಗೆಗೆ ಹಿನ್ನಡೆಯಾಗುತ್ತದೆ’ ಎಂದು ಹೇಳಿದರು.

‘ಕುಮಾರಸ್ವಾಮಿ ಯಾರಿಗೆ ಬೇಕಾದರೂ ಸೂಕ್ತರಾಗುತ್ತಾರೆ. ಅದೇ ಅರ್ಥದಲ್ಲಿ ಅವರನ್ನು ‘ಜೋಕರ್’ ಎಂದು ಹೇಳಿದ್ದೇನೆ. ಅಧಿಕಾರದಲ್ಲಿದ್ದಾಗ ರಾಮನಗರಕ್ಕೆ ಭೇಟಿ ನೀಡಲಿಲ್ಲ. ಈಗ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದಾರೆ. ಅವರಿಗೆ ರಾಜಕೀಯ ಅಭದ್ರತೆ ಕಾಡುತ್ತಿದೆ’ ಎಂದು ಟೀಕಿಸಿದರು.

‘ಇಸ್ಪೀಟ್ ಆಟ ನನಗೆ ಗೊತ್ತಿಲ್ಲ. ಆದರೆ, ಕುಮಾರಸ್ವಾಮಿ ಮಲೇಷಿಯಾ, ಸಿಂಗಾಪುರದಲ್ಲಿ ಇಸ್ಪೀಟ್, ಬೇರೆ ಗ್ಯಾಂಬ್ಲಿಂಗ್ ಆಡಿದ ಫೋಟೋ ನನ್ನ ಬಳಿ ಇದೆ. ಬೇಕಾದರೆ ಬಿಡುಗಡೆ ಮಾಡುತ್ತೇನೆ’ ಎಂದು ಹೇಳಿದರು.

‘ಅವರು ನನಗೆ ಬಚ್ಚಾ ಎಂದರೆ ನನಗೇನು ವ್ಯತ್ಯಾಸವಾಗುದಿಲ್ಲ. 20 ವರ್ಷದ ಹಿಂದೆ ಅವರು ರಾಮನಗರಕ್ಕೆ ಬರುವಾಗ ಬಚ್ಚಾನೇ ಆಗಿದ್ದರು’ ಎಂದು ತಿರುಗೇಟು ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು