ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರದ ಶ್ರೀಶೈಲದಲ್ಲಿ ಸ್ಥಳೀಯರು-ಕನ್ನಡಿಗರ ಹಿಂಸಾಚಾರ: ಕಾರಜೋಳ ಕಳವಳ

Last Updated 31 ಮಾರ್ಚ್ 2022, 8:38 IST
ಅಕ್ಷರ ಗಾತ್ರ

ಬೆಂಗಳೂರು:ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ನಡೆದಿರುವ ಹಿಂಸಾಚಾರದ ಬಗ್ಗೆಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದ್ದಾರೆ.

ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯೆ ಬುಧವಾರ ತಡರಾತ್ರಿ ಘರ್ಷಣೆ ಉಂಟಾಗಿದೆ. ಈ ವೇಳೆ ಹಲವು ವಾಹನಗಳು ಜಖಂ ಆಗಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಕಳವಳ ತಂದಿದೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕ್ಷುಲ್ಲಕ ಕಾರಣಕ್ಕೆಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳ ಭಕ್ತರ ಮೇಲೆ ಹಲ್ಲೆಯಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ.

ಮುಂದುವರಿದು,ಕರ್ನಾಟಕದ ಎಲ್ಲಾ ಯಾತ್ರಿಗಳ ಸುರಕ್ಷತೆ ಕಾಪಾಡಬೇಕುಮತ್ತು ಗಾಯಾಳುಗಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಎಲ್ಲರೂಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಲುವ್ಯವಸ್ಥೆ ಕಲ್ಪಿಸಬೇಕು ಎಂದುಕರ್ನೂಲ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯವರನ್ನುವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.ಪರಿಸ್ಥಿತಿಯ ಕುರಿತು ಸತತ ನಿಗಾ ವಹಿಸಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲು, ಯಾತ್ರಿಗಳ ಸುರಕ್ಷತೆಯನ್ನು ಕಾಪಾಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT