ಬುಧವಾರ, ಮಾರ್ಚ್ 3, 2021
19 °C

ಖಾತೆ ಬದಲಾವಣೆ ಇಲ್ಲ, ಬೆಳಗಾವಿ ಉಪಚುನಾವಣೆಗೂ ಸ್ಪರ್ಧಿಸಲ್ಲ: ಜಗದೀಶ ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆ ಸ್ಪರ್ಧಿಸುವ ಉದ್ದೇಶವೂ ಇಲ್ಲ, ಖಾತೆ ಬದಲಾವಣೆಯೂ ಇಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಹೊಸ ಕೈಗಾರಿಕಾ ನೀತಿಯ ಬಿಡುಗಡೆ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಪ್ರಮುಖ ನಾಯಕರ ಸಮಿತಿ ಸಭೆಯಲ್ಲಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಚರ್ಚೆ ಆಗಿಲ್ಲ. ಚುನಾವಣೆ ಘೋಷಣೆ ಆದ ಬಳಿಕ ಆ ಕುರಿತು ಚರ್ಚೆ ನಡೆಯಲಿದೆ ಎಂದರು.

ಬೆಳಗಾವಿಯಿಂದ ಕಣಕ್ಕಿಳಿಯುವ ಬಗ್ಗೆ ಪಕ್ಷದಲ್ಲಿ ಯಾರೂ ನನಗೆ ಸೂಚಿಸಿಲ್ಲ. ನಾನೂ ಬಯಕೆ ವ್ಯಕ್ತಪಡಿಸಿಲ್ಲ. ನೀವೆ ಇಂತಹದ್ದನ್ನು ಸೃಷ್ಟಿ ಮಾಡಿ ಬಳಿಕ ಪ್ರಶ್ನೆ ಕೇಳುತ್ತೀರಿ ಎಂದು ಹೇಳಿದರು.

ಖಾತೆ ಬದಲಾವಣೆ ಆಗಬಹುದೇ ಎಂಬ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿ ಸೇರಿ ಯಾರೂ ನನ್ನ ಜತೆ ಚರ್ಚೆ ಮಾಡಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಮುಖ್ಯಮಂತ್ರಿಯವರ ಪರಮಾಧಿಕಾರ. ಖಾತೆ ಬದಲಾವಣೆ ಬಗ್ಗೆ ಎಲ್ಲೂ ಚರ್ಚೆಯೇ ಆಗಿಲ್ಲ. ಇದೂ ಕೂಡ ಮಾಧ್ಯಮದವರ ಸೃಷ್ಟಿ ಎಂದು ಶೆಟ್ಟರ್‌ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು