ಮಂಗಳವಾರ, ಆಗಸ್ಟ್ 16, 2022
29 °C

ಗ್ರಾಮ ಪಂಚಾಯಿತಿ ಚುನಾವಣೆ: ವಿಧಾನಮಂಡಲ ಅಧಿವೇಶನ ನಾಲ್ಕೇ ದಿನಕ್ಕೆ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಿಧಾನಸಭಾ ಅಧಿವೇಶನ ಗುರುವಾರ ( ಡಿ.10) ಅಂತ್ಯಗೊಳಿಸಲು ತೀರ್ಮಾನ ಮಾಡಿದ್ದೇವೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಸದನ ಕಲಾಪ ಸಮಿತಿ ಸಭೆಯ‌ ಬಳಿಕ‌ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಕಾರಣ ಅಧಿವೇಶನ ಅವಧಿ ಮೊಟಕುಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಒಂದು ದೇಶ ಒಂದು ಚುನಾವಣೆ ಕುರಿತ ಚರ್ಚೆ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ತೀರ್ಮಾನ ಮಾಡಲಾಗಿದೆ. ಗೋಹತ್ಯೆ ತಡೆ ಮಸೂದೆ ಮಂಡನೆ ಮಾಡುತ್ತೀರಾ ಎಂಬ ಪ್ರಶ್ನೆಗೆ  ಮಸೂದೆ ಮಂಡಿಸುತ್ತೇವೆ, ಯಾವುದೆಲ್ಲ ಮಸೂದೆಗಳು ಬರುತ್ತೆ ಅಂತ ನಾಳೆ ನಾಡಿದ್ದು ಗೊತ್ತಾಗಲಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು