ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಶ್ಯವಾಣಿ ಜಾತಿ ಪ್ರವರ್ಗ– 3ಬಿಗೆ ಸೇರ್ಪಡೆ: ಕೋಟ ಶ್ರೀನಿವಾಸ ಪೂಜಾರಿ

Last Updated 29 ಡಿಸೆಂಬರ್ 2022, 7:08 IST
ಅಕ್ಷರ ಗಾತ್ರ

ಬೆಳಗಾವಿ: ‘ಹಿಂದುಳಿದ ವರ್ಗಗಳ ಜಾತಿ ಪಟ್ಟಿ ಪ್ರವರ್ಗ –3ಬಿ ಅಡಿಯಲ್ಲಿ ‘ವೈಶ್ಯವಾಣಿ’ ಸಮುದಾಯವನ್ನು ಸೇರಿಸಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರವರ್ಗ 3ಬಿಗೆ ‘ವೈಶ್ಯವಾಣಿ’ ಜಾತಿಯನ್ನು ಸೇರಿಸಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಸರ್ಕಾರಕ್ಕೆ ಸಲಹೆ ನೀಡಿದೆ’ ಎಂದರು.

‘ವೈಶ್ಯವಾಣಿ’ ಸಮಾಜ ಹಿಂದುಳಿದ ಸಮುದಾಯವಾಗಿದ್ದು, ಜಾತಿವಾರು ಪಟ್ಟಿಗೆ ಸೇರಿಸದೇ ಇರುವುದರಿಂದ ಈ ವರ್ಗದ ಮಕ್ಕಳು ಶೈಕ್ಷಣಿಕ ಆರ್ಥಿಕ ಮತ್ತು ಇತರ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ’ ಎಂದು ಹಾಲಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT