ಗುರುವಾರ , ಮೇ 19, 2022
21 °C

ಲೋಕಾಯುಕ್ತ ಬುಡಮೇಲು ಮಾಡಿದ ಸಿದ್ದರಾಮಯ್ಯ: ಕೋಟ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಲೋಕಾಯುಕ್ತವನ್ನು ಬುಡಮೇಲು ಮಾಡಿ ಎಸಿಬಿಯನ್ನು ಸ್ಥಾಪಿಸಿದರು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯನವರೇ ನಿಮ್ಮ ಅವಧಿಯಲ್ಲಿ ಆದ ಎಷ್ಟು ಅಕ್ರಮಗಳ ತನಿಖೆ ಮಾಡಿದ್ದೀರಿ’ ಎಂದೂ ಪ್ರಶ್ನಿಸಿದರು. 

ಪಿಎಸ್‍ಐ ನೇಮಕಾತಿ ಅಕ್ರಮ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ದೋಷಿಗಳು ಮತ್ತು ನಿರ್ದೋಷಿಗಳನ್ನು ತನಿಖಾ ಸಂಸ್ಥೆಗಳು ನಿರ್ಧರಿಸುತ್ತವೆ’ ಎಂದರು.

ಇದನ್ನೂ ಓದಿ: 

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರ ಅಪಪ್ರಚಾರದ ಹೊರತಾಗಿಯೂ ರಾಜ್ಯದಲ್ಲಿರುವ ದಲಿತರು, ಹಿಂದುಳಿದವರು ಮತ್ತು ಪರಿಶಿಷ್ಟ ಜಾತಿ, ಪಂಗಡದವರು ಬಿಜೆಪಿಯನ್ನು  ಬೆಂಬಲಿಸುತ್ತಿದ್ದಾರೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್‍ನವರು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು