ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ತೆರಿಗೆ ವಂಚನೆ: ಕಠಿಣ ಕ್ರಮ: ಎಂ.ಟಿ.ಬಿ. ನಾಗರಾಜ್

Last Updated 15 ಮಾರ್ಚ್ 2022, 22:06 IST
ಅಕ್ಷರ ಗಾತ್ರ

ಬೆಂಗಳೂರು: ‘ಆಸ್ತಿ ತೆರಿಗೆ ವಂಚನೆ ಪ್ರಕರಣಗಳಲ್ಲಿ ಲೋಪ ಎಸಗಿದ ಸ್ಥಳೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದರು.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಕೆ. ಗೋವಿಂದರಾಜ್ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದ ನಗರ ಸ್ಥಳೀಯಸಂಸ್ಥೆಗಳಿಂದ 2018-19ರಲ್ಲಿ ₹ 711.18 ಕೋಟಿ, 2019-20ರಲ್ಲಿ ₹ 736.77 ಕೋಟಿ, 2020-21ರಲ್ಲಿ ₹ 841.72 ಕೋಟಿ ತೆರಿಗೆ ಸಂಗ್ರಹವಾಗಿದೆ. ಸ್ವಯಂ ಆಸ್ತಿ ತೆರಿಗೆ ಪದ್ಧತಿ ಪ್ರಕಾರವೇ ಆಸ್ತಿ ತೆರಿಗೆ ನಿಗದಿ ಮಾಡಲಾಗುತ್ತಿದೆ’ ಎಂದರು.

‘ಸ್ಥಿರಾಸ್ತಿ ಗುರುತಿನ ಸಂಖ್ಯೆ (ಪಿಐಡಿ) ನಂಬರ್ ಆಧಾರದಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ನಿಗದಿಪಡಿಸಲಾಗುತ್ತಿದೆ. ಇ-ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ತೆರಿಗೆ ಪಾವತಿಸಲು ಅವಕಾಶ ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT