ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ‌: ಮುರುಗೇಶ್ ನಿರಾಣಿ

Last Updated 22 ಜನವರಿ 2021, 6:33 IST
ಅಕ್ಷರ ಗಾತ್ರ

ಬೆಂಗಳೂರು: ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಕಲ್ಲುಕ್ವಾರಿಯಲ್ಲಿ ತೊಡಗಿಸಿಕೊಂಡವರು ಎಷ್ಟೇ ಪ್ರಭಾವಿಗಳಗಾಗಿದ್ದರೂ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ‌ ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮಾಡಿದ್ದಾರೆ.

ಕಳೆದ ರಾತ್ರಿ ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ.
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಸರ್ಕಾರದ ವತಿಯಿಂದ ಅಗತ್ಯ ನೆರವು ನೀಡಲು ಸರ್ಕಾರ ಸಿದ್ದವಿದೆ. ಕಳೆದ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು,ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿಸಲು ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT