ಬುಧವಾರ, ಡಿಸೆಂಬರ್ 8, 2021
23 °C

ಬಸ್‌ ಚಲಾಯಿಸಿದ ಸಚಿವ ಬಿ.ಸಿ. ನಾಗೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‍ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಬಸ್‌ ಚಲಾಯಿಸಿ ಗಮನ ಸೆಳೆದರು.

‘ಸೇವ್‌ ದಿ ಚಿಲ್ಡ್ರನ್‌’ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಚಾರ ಕಲಿಕಾ ಕೇಂದ್ರ ಉದ್ಘಾಟಿಸಿದ ಬಳಿಕ ಬಸ್‌ ಏರಿದ ಅವರು ಚಾಲಕನ ಆಸನದಲ್ಲಿ ಕುಳಿತು ಆವರಣದಲ್ಲೇ ಒಂದು ಸುತ್ತು ಬಸ್‌ ಚಲಾಯಿಸಿದರು. 

‘ಸೇವ್‌ ದಿ ಚಿಲ್ಡ್ರನ್‌’ ಸಂಸ್ಥೆಯು ಮೂರು ಬಸ್‌ಗಳು, ಪುಸ್ತಕ ಹಾಗೂ ಡಿಜಿಟಲ್‌ ರೂಪದ ಕಲಿಕಾ ಸಾಮಗ್ರಿಗಳನ್ನು ಕೊಡುಗೆ ನೀಡಿದೆ. ಬಡವರು ಹಾಗೂ ಕೊಳೆಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಶಿಕ್ಷಣ ಒದಗಿಸುವುದು ಇದರ ಉದ್ದೇಶ. ಇದಕ್ಕಾಗಿ ಶಿಕ್ಷಕರನ್ನೂ ನಿಯೋಜಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು