ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕವಚನದಲ್ಲಿ ಮಾತನಾಡೋದು ಶೋಭೆ ತರಲ್ಲ: ನಾರಾಯಣ ಗೌಡ

Last Updated 5 ಜುಲೈ 2021, 10:56 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಏಕವಚನದಲ್ಲಿ ಆ ರೀತಿ ಮಾತನಾಡೋದು ಶೋಭೆ ತರಲ್ಲ’ ಎಂದು ಯುವಜನ ಮತ್ತು ಕ್ರೀಡಾ ಸಬಲೀಕರಣ ಸಚಿವ ನಾರಾಯಣ ಗೌಡ ಪ್ರತಿಕ್ರಿಯಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕಎಚ್‌.ಡಿ. ಕುಮಾರಸ್ವಾಮಿ ಅವರು, ಕೆಆರ್‌ಎಸ್‌ಗೆ ಸಮಲತಾನ್ನ ಅಡ್ಡಡ್ಡ ಮಲಗಿಸಿ ಎಂದಿರುವುದಕ್ಕೆಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೆಆರ್‌ಎಸ್‌ನಲ್ಲಿ ಯಾವುದೇ ಬಿರುಕು ಕಾಣಿಸಿಕೊಂಡಿಲ್ಲ. ಮುಖ್ಯ ಎಂಜಿನಿಯರ್‌, ತಜ್ಞರು ಪರಿಶೀಲನೆ ಮಾಡಿದ್ದಾರೆ. ತೂಬು, ನೀರು ಎತ್ತುವ ಕಾಮಗಾರಿಗಳು ನಡೆಯುತ್ತಿವೆ’ ಎಂದು ಉತ್ತರಿಸಿದರು.

‘ಮೇಕೆದಾಟು ವಿಚಾರ ಸರ್ಕಾರದ ಗಮನದಲ್ಲಿದೆ. ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT