ಶುಕ್ರವಾರ, ಸೆಪ್ಟೆಂಬರ್ 25, 2020
28 °C

ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ: ಸಚಿವ ನಾರಾಯಣ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಚಿತ್ರರಂಗಕ್ಕೂ ನನಗೂ ಸಂಪರ್ಕ‌ ಇಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ರಾಗಿಣಿ ಅವರನ್ನು ಪ್ರಚಾರಕ್ಕೆ ನಾನು ಕರೆಸಿರಲಿಲ್ಲ. ಹಿತೈಷಿಗಳು ಕರೆಸಿದ್ದರು. ಪ್ರಚಾರಕ್ಕೆ ಬರುವಾಗ ಬೇಡ ಎಂದು ಹೇಳಲು ಆಗುವುದಿಲ್ಲ’ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ನಾರಾಯಣ ಗೌಡ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ಪರವಾಗಿ ಪಕ್ಷದಲ್ಲಿ ಯಾರೂ ಇಲ್ಲ. ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಚಾರಕ್ಕೆ‌ ಬಂದರೆ ನಾವು ಏನು‌ ಮಾಡುವುಕ್ಕೆ ಆಗುತ್ತದೆ’ ಎಂದು ಅವರು ಕೇಳಿದರು.

ಇದನ್ನೂ ಓದಿ: ರಾಗಿಣಿ ಬಿಜೆಪಿಯವರೋ ಅಲ್ಲವೋ? ಬಿಜೆಪಿ–ಕಾಂಗ್ರೆಸ್‌ ನಡುವೆ ಕುತೂಹಲದ ಚರ್ಚೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು