ಮಂಗಳವಾರ, ಮೇ 18, 2021
30 °C

ಶಿಕ್ಷಣ ಸಚಿವರ ಆಪ್ತ ಸಹಾಯಕ ಕೋವಿಡ್‌ನಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ. ರಮೇಶ್‌ ಅವರು ಕೋವಿಡ್‌ನಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು. ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವು ಸಂಭವಿಸಿದೆ.

ರಮೇಶ್‌ ಸಾವಿನ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುರೇಶ್‌ಕುಮಾರ್‌, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ, ರಮೇಶ್ ಇನ್ನಿಲ್ಲ. ಸುಮಾರು ಎಂಟು ವರ್ಷಗಳಿಂದ ನನ್ನೊಡನಿದ್ದು, ಜನಪರ ಕಾಳಜಿಯಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು