ಸೋಮವಾರ, ಅಕ್ಟೋಬರ್ 26, 2020
24 °C

‌4.59 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿ: ಆರ್‌. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿ ಮತ್ತು ಪ್ರವಾಹದಿಂದ 4.59 ಲಕ್ಷ ಹೆಕ್ಟೇರ್‌ ವಿಸ್ತೀರ್ಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಈ ಪ್ರಮಾಣ ಇನ್ನೂ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ವಿಧಾನ ಪರಿಷತ್‌ನಲ್ಲಿ ಸೋಮವಾರ ನಿಯಮ 68ರ ಅಡಿಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ‘23 ಜಿಲ್ಲೆಗಳ 130 ತಾಲ್ಲೂಕುಗಳು ಪ್ರವಾಹ ಎದುರಿಸಿವೆ. ಆಗಸ್ಟ್‌ 4ರಿಂದ ಈಚೆಗೆ ರಾಜ್ಯದಲ್ಲಿ ವಾಡಿಕೆಯ ಶೇ 400ರಷ್ಟು ಮಳೆ ಬಿದ್ದಿದೆ’ ಎಂದರು.

ಪ್ರವಾಹ ಮತ್ತು ಅತಿವೃಷ್ಟಿ ಎದುರಿಸಲು ಸರ್ಕಾರ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಗಳಲ್ಲಿ ₹ 831 ಕೋಟಿ ಲಭ್ಯವಿದೆ. ಹೆಚ್ಚುವರಿ ₹ 50 ಕೋಟಿ ಬಿಡುಗಡೆ ಮಾಡಲಾಗಿದೆ. 92 ಕಾಳಜಿ ಕೇಂದ್ರ ಗಳನ್ನು ತೆರೆದಿದ್ದು, 6,716 ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗಿದೆ ಎಂದು ಹೇಳಿದರು.

ರಾಜ್ಯವು ಸತತವಾಗಿ ಎರಡನೇ ವರ್ಷ ಪ್ರವಾಹ ಸ್ಥಿತಿ ಎದುರಿಸುತ್ತಿದೆ. ಈ ಹಿಂದಿನ ಅಂದಾಜಿನಲ್ಲಿ ₹ 9,445 ಕೋಟಿ ನೆರವು ಕೋರಿ ಪ್ರಧಾನಿಗೆ ಮನವಿ ಸಲ್ಲಿಸಲಾಗಿತ್ತು. ಮತ್ತೆ ಪ್ರವಾಹ ಉಂಟಾಗಿರುವುದರಿಂದ ಮತ್ತೊಮ್ಮೆ ಅಂದಾಜು ಮಾಡಿ, ವರದಿ ಸಲ್ಲಿಸಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್‌)ಯಿಂದ ತುರ್ತಾಗಿ ₹ 390 ಕೋಟಿ ಬಿಡುಗಡೆ ಮಾಡುವಂತೆ ಕೋರಲಾಗಿದೆ ಎಂದರು.

ಅನ್ಯಾಯ ಆಗಿಲ್ಲ: ಪ್ರವಾಹ ಪರಿಹಾರ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು ಎಂದರು. ‌

ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ, ಜೆಡಿಎಸ್‌ನ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ ಸೇರಿದಂತೆ ಹಲವರು ಚರ್ಚೆಯಲ್ಲಿ ಪಾಲ್ಗೊಂಡರು.‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು