ಸೋಮವಾರ, ಜೂನ್ 21, 2021
27 °C

‘ತೌಕ್ತೆ’ ಚಂಡಮಾರುತ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ: ಆರ್‌. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಎದುರಿಸಲು ಸರ್ಕಾರ ಸನ್ನದ್ಧವಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂಟು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಈ ಶಿಬಿರಗಳಲ್ಲಿ 10 ಸಾವಿರ ಜನರು ಉಳಿದುಕೊಳ್ಳಬಹುದು’ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು. 

‘ಈ ಮೂರು ಜಿಲ್ಲೆಗಳಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳ ರಜೆ ರದ್ದುಪಡಿಸಲಾಗಿದೆ. ಯಾವುದೇ ಅನಾಹುತ ಆಗದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ’ ಎಂದು ಶನಿವಾರ ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಅಧಿಕಾರಿಗಳ ಜೊತೆ ತುರ್ತು ಸಭೆ ಬಳಿಕ ಮಾತನಾಡಿದ ಅವರು, ‘ಸದ್ಯ ಎರಡು ಎನ್‌ಡಿಆರ್‌ಎಫ್ ತಂಡಗಳು ದಕ್ಷಿಣ ಕನ್ನಡ ಮತ್ತು ಕೊಡಗಿಗೆ ಬಂದಿವೆ. ಪೊಲೀಸ್, ಅಗ್ನಿಶಾಮಕ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಸಿದ್ಧವಾಗಿರುವಂತೆ ಸೂಚಿಸಲಾಗಿದೆ’ ಎಂದರು.

’ಉಡುಪಿಯಲ್ಲಿ ₹ 23 ಕೋಟಿ, ಉತ್ತರ ಕನ್ನಡದಲ್ಲಿ ₹ 60 ಕೋಟಿ, ದಕ್ಷಿಣ ಕನ್ನಡದಲ್ಲಿ ₹ 12 ಕೋಟಿ ಆಯಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಮೀಸಲಿಡಲಾಗಿದೆ. ಅಗತ್ಯ ಕ್ರಮಗಳಿಗೆ ಈ ಹಣ ಬಳಸುವಂತೆ ಆದೇಶ ನೀಡಲಾಗಿದೆ’ ಎಂದೂ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು