ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರದ ಮೇಲೆ ಒತ್ತಡ: ರಮೇಶ ಜಾರಕಿಹೊಳಿ

Last Updated 13 ಅಕ್ಟೋಬರ್ 2020, 9:43 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ಪಡೆಯಲು ಶೀಘ್ರವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ವಿವಿಧ ಯೋಜನೆಗಳಿಗೆ ಪರಿಸರ ಅನುಮತಿ ಪಡೆಯುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಅವರು ಮಾತನಾಡಿದರು.

ಮೇಕೆದಾಟು ಸೇರಿದಂತೆ ಹಲವು ಯೋಜನೆಗಳಿಗೆ ಪರಿಸರ ಇಲಾಖೆಯ ಅನುಮತಿ ಬೇಕಿದೆ. ಇಲ್ಲವಾದಲ್ಲಿ ಯೋಜನೆಯ ಪ್ರಗತಿ ಆಗುವುದಿಲ್ಲ. ಈ ಸಂಬಂಧ ಕೇಂದ್ರ ಪರಿಸರ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ದೆಹಲಿಯಲ್ಲಿ ಭೇಟಿ ಮಾಡಿ ಒತ್ತಾಯ ಮಾಡುವುದಾಗಿ ಹೇಳಿದರು.

ಜಲಸಂಪನ್ಮೂಲ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಾಡಾ ಮತ್ತು ವಾಲ್ಮಿ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆಧುನಿಕ ಮತ್ತು ಸಾವಯವ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT