ಶುಕ್ರವಾರ, ಮೇ 20, 2022
24 °C

ಪೂರ್ಣ ಪ್ರಮಾಣದ ತರಗತಿ: ಇಂದು ಸಲಹಾ ಸಮಿತಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿ.ನರಸೀಪುರ: ‘ವಿದ್ಯಾಗಮ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವಂತೆ ಪೋಷಕರಿಂದ ನಿರಂತರ ಒತ್ತಡ ಬರುತ್ತಿದೆ. ಮಂಗಳವಾರ ತಾಂತ್ರಿಕ ಸಲಹಾ ಸಮಿತಿ, ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಬಗ್ಗೆ  ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಕೆಲ ಖಾಸಗಿ ಶಾಲೆಗಳು ವಿದ್ಯಾಗಮ ತರಗತಿಗಳನ್ನು ಪೂರ್ಣವಾಗಿ ನಡೆಸುತ್ತಿರುವ ಹಾಗೂ 1ರಿಂದ 5 ನೇ ತರಗತಿ ಆರಂಭಿಸಿರುವ ದೂರುಗಳ ಬಗ್ಗೆ ಪ್ರತಿಕ್ರಿಯಿಸಿ, ‘ಯಾವುದೇ ಕಾರಣಕ್ಕೂ ಸರ್ಕಾರದ ನಿರ್ದೇಶನವಿಲ್ಲದೇ ತರಗತಿಗಳು ಆರಂಭವಾಗಬಾರದು. ಇದೇ ರೀತಿ ಆರಂಭಿಸಲು ಹೋಗಿ ಮುಳಬಾಗಿಲು ತಾಲ್ಲೂಕಿನಲ್ಲಿ ಅವಘಡ ನಡೆದಿದೆ. ಈಗ ಆ ಶಾಲೆಯ ಮಾನ್ಯತೆ ರದ್ದತಿಗೆ ಚಿಂತನೆ ನಡೆದಿದೆ’ ಎಂದರು.

‘ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾಲಯದಿಂದ ಸಮೀಕ್ಷಾ ವರದಿ ಬಂದಿದೆ. ಕಲಿಕೆಯಿಂದ ವಿಮುಖವಾಗುತ್ತಿರುವ ಮಕ್ಕಳ ಸಮೀಕ್ಷೆ ನಡೆಸಲಾಗಿದೆ. ಶಾಲೆ ಇಲ್ಲದ ಕಾರಣ ಬಾಲ ಕಾರ್ಮಿಕ ಹಾಗೂ ಬಾಲ್ಯವಿವಾಹ ಪ್ರಕರಣ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ  ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಪ್ರತಿ ತಾಲ್ಲೂಕಿನಲ್ಲಿ ಸಮೀಕ್ಷೆ ನಡೆಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು