ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಭರದ ಸಿದ್ಧತೆ: ಎಸ್. ಸುರೇಶ್‌ಕುಮಾರ್‌

ಸಂಘ–ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌ ಕೊಡುಗೆ
Last Updated 9 ಜುಲೈ 2021, 9:36 IST
ಅಕ್ಷರ ಗಾತ್ರ

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪರೀಕ್ಷಾ ನಿರ್ವಹಣೆಗೆ ಹಾಜರಾಗುವ ಸಿಬ್ಬಂದಿಯ ಪೈಕಿ ಶೇ 95ರಷ್ಟು ಶಿಕ್ಷಕರಿಗೆ ಮೊದಲ ಡೋಸ್ ಲಸಿಕೆ ಹಾಕಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದರು. ‌

‘ಪರೀಕ್ಷೆಗೆ ಕೇವಲ 10 ದಿನಗಳು ಇವೆ. ಈ ಸಂದರ್ಭದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಕೆಲಸ ಬೇಡ. ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮೂಡಿಸಲು ಎಲ್ಲರೂ ಶ್ರಮಿಸಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಸ್ಕೌಟ್‌ ಅಂಡ್‌ ಗೈಡ್ಸ್‌, ರೋಟರಿ ಕ್ಲಬ್‌, ಯೂಥ್‌ ಫಾರ್‌ ಸೇವಾ ಸಂಸ್ಥೆಗಳು ಸೇರಿದಂತೆ ಹಲವು ಸಂಘ–ಸಂಸ್ಥೆಗಳು ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಾಗಿ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ಗಳನ್ನು ಉಚಿತವಾಗಿ ನೀಡಿವೆ. ಪರೀಕ್ಷಾ ಸಂದರ್ಭ ಇವುಗಳನ್ನು ವಿತರಿಸಲಾಗುವುದು’ ಎಂದು ಅವರು ತಿಳಿಸಿದರು.

‘ನಾನು ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ಬೆಳಿಗ್ಗೆ ಸಂವಾದ ನಡೆಸಿದ್ದೇನೆ. ಪರೀಕ್ಷೆ ನಡೆಸುತ್ತಿರುವುದಕ್ಕೆ ಅವರು ಸಂತಸಗೊಂಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ’ ಎಂದರು.

‘ಹಠಕ್ಕೆ ಬಿದ್ದು ಅಥವಾ ಪ್ರತಿಷ್ಠೆಗೆ ಪರೀಕ್ಷೆ ನಡೆಸುತ್ತಿಲ್ಲ. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಅವರ ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರಹಸ್ಯ ಕಾರ್ಯಸೂಚಿ ಇಲ್ಲ, ವಿದ್ಯಾರ್ಥಿಗಳಿಗೆ ಸಾಮಾಜಿಕ ಅನ್ಯಾಯವೂ ಆಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ಸೋಮವಾರ ಸಭೆ:ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆ ಹೇಗಿರಬೇಕು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಫೋನ್ ಸೇರಿದಂತೆ ಆನ್‌ಲೈನ್‌ ಕಲಿಕೆಗೆ ಬೇಕಾದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಜುಲೈ 20ಕ್ಕೆ ದ್ವಿತೀಯ ಪಿಯು ಫಲಿತಾಂಶ:‘ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ಜುಲೈ 20ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಸುರೇಶ್‌ಕುಮಾರ್‌ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT