ಬೆಳಗಾವಿ: ಜವಳಿ ಸಚಿವ ಶ್ರೀಮಂತಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 10,070 ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಇದೇ ವೇಳೆ 130 ಸಾವುಗಳೂ ಸಂಭವಿಸಿವೆ. ಗುರುವಾರದ ವೇಳೆಗೆ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 6,11,837ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 8,994 ಆಗಿದೆ. 4,92,412 ಜನರು ಗುಣಮುಖರಾಗಿದ್ದಾರೆ. 1,10,412 ಸಕ್ರಿಯ ಪ್ರಕರಣಗಳು ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.