ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಡಿಪ್ಲೊಮಾ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ: ಎಸ್.ಟಿ.‌ ಸೋಮಶೇಖರ್

Last Updated 2 ಜುಲೈ 2022, 8:40 IST
ಅಕ್ಷರ ಗಾತ್ರ

ಬೆಂಗಳೂರು: ಸಹಕಾರ ವಿಷಯದಲ್ಲಿ ಡಿಪ್ಲೊಮಾ ಶಿಕ್ಷಣ ಪಡೆದವರಿಗೆ ಸಹಕಾರ ಸಂಸ್ಥೆಗಳ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ 100ನೇ ಅಂತರರಾಷ್ಟ್ರೀಯ ಸಹಕಾರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಸಂಸ್ಥೆಗಳಿಗೆ ಈ ಕ್ಷೇತ್ರದ ಕುರಿತು ಜ್ಞಾನ ಹೊಂದಿರುವ ವೃತ್ತಿಪರರ ನೇಮಕಾತಿ ಅಗತ್ಯವಿದೆ. ಅದಕ್ಕೆ ಪೂರಕವಾಗಿ ಸಹಕಾರ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂದರು.

ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವಹಿವಾಟನ್ನು ಸಂಪೂರ್ಣ ಕಂಪ್ಯೂಟರೀಕರಣ ಮಾಡುವ ಯೋಜನೆಗೆ ₹ 2,500 ಕೋಟಿ ನೆರವು ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಶೀಘ್ರದಲ್ಲಿ ಈ ಯೋಜನೆ ಜಾರಿಯಾಗಲಿದೆ ಎಂದು ಹೇಳಿದರು.

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ಸಹಕಾರ ಸಂಘಗಳ ರಿಜಿಸ್ಟ್ರಾರ್ ಡಾ.ಎಂ.ವಿ. ವೆಂಕಟೇಶ್, ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಅರಳಿ ಸೂರ್ಯಕಾಂತ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT