ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಷಡ್ಯಂತ್ರ ಆರಂಭ: ತೇಜೋವಧೆ ಮಾಡುವ ಯತ್ನವಿದು –ಸುಧಾಕರ್

Last Updated 6 ಮಾರ್ಚ್ 2021, 5:11 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜಕೀಯ ಷಡ್ಯಂತ್ರ ಆರಂಭವಾಗಿದೆ. ಹೇಗಾದರೂ ಮಾಡಿ ತೇಜೋವಧೆ ಮಾಡಲು ಯತ್ನ ನಡೆಯುತ್ತಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸದಾಶಿವನಗರದಲ್ಲಿರುವ ತಮ್ಮ‌ ನಿವಾಸದ ಬಳಿ ಶನಿವಾರ ಸುದ್ದಿಗಾರ ಜೊತೆ ಮಾತನಾಡಿದ ಅವರು, ‘ಅನೇಕ ವರ್ಷಗಳ ಹೆಸರು, ಜನಪ್ರಿಯತೆಯನ್ನು ತೇಜೋವಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಲವಾದ ಕಾನೂನುಗಳನ್ನು ತರಬೇಕು. ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರ ಜೊತೆ ಈ ಬಗ್ಗೆ ಚರ್ಚೆ ನಡಸಲಾಗಿದೆ’ ಎಂದರು.

ಎಲ್ಲಾ ಕ್ಷೇತ್ರಗಳಲ್ಲಿ ಇಂಥ ಯತ್ನಗಳು ನಡೆಯುತ್ತಿವೆ. ಅದರಲ್ಲೂ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಿದೆ. ನೈಜತೆ ಇದ್ದರೆ ಯಾವುದನ್ನೂ ನಿಷೇಧಿಸಲು ಸಾಧ್ಯವಿಲ್ಲ. ನಾನೂ ಸೇರಿದಂತೆ ಯಾರದೇ ಆಗಿರಲಿ‌, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಜನರ ಮುಂದೆ ಖಳನಾಯಕರನ್ನಾಗಿ ಮಾಡುವ ಷಡ್ಯಂತ್ರವಿದು ಎಂದು ಟೀಕಿಸಿದರು.

ರಷ್ಯಾ, ದುಬೈನಿಂದ ವಿಡಿಯೋ ಅಪ್ ಲೋಡ್ ಮಾಡಲಾಗುತ್ತಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ನಾವಷ್ಟೇ ಅಲ್ಲ, ಇಂದು ಐದಾರು ಜನ ನ್ಯಾಯಾಲಯಕ್ಕೆ ಹೋಗುತ್ತಾರೆ. ಮಾಧ್ಯಮಗಳ ಮೂಲಕ ತೇಜೋವಧೆ ಮಾಡಿಸುತ್ತಿದ್ದಾರೆ. ಯಾವುದೇ ವಿಚಾರ ಬಂದಾಗ ಪರಾಮರ್ಶಿಸಿ 24 ಗಂಟೆನೂ ಹಾಕಿ. ಸತ್ಯವಂತರಿಗೆ ಭಯ ಇಲ್ಲ. ಆದರೆ, ಹಿಟ್ ಅಂಡ್ ರನ್ ಮಾಡುವ ಜನರಿಗೆ ಭಯ ಬೀಳಬೇಕಾಗಿದೆ ಎಂದರು.

ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಮೊದಲ ದಿನ ಸಂತ್ರಸ್ತೆ ಎಂದು ಹೇಳಿದ್ದಾರೆ. ಆದರೆ, ಅವಳು ಇಲ್ಲಿಯವರೆಗೆ ಯಾಕೆ ಮುಂದೆ ಬಂದಿಲ್ಲ. ಆಕೆಯ ಕುಟುಂಬ ಕೂಡ ಮುಂದೆ ಬಂದಿಲ್ಲ. ಅವಳು ಯಾರು ಏನೂ ಎಂಬುದು ಗೊತ್ತಿಲ್ಲ. ಯಾಕೆ ಗುರಿ ಮಾಡ್ತಾ ಇದ್ದಾರೆ ಅನ್ನೋದು ಗೊತ್ತಿಲ್ಲ.‌ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ನಾವು ಮಾಡುವುದೂ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT