ಬೆಂಗಳೂರು: ‘ಸದ್ಯ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ, ವಿಶ್ವ ಬ್ಯಾಂಕ್ ನೆರವಿನಲ್ಲಿ ಹೊಸ ಪಿಎಚ್‌ಸಿಗಳನ್ನು ಆರಂಭಿಸಲಾಗುವುದು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹೊಸ ಪಿಎಚ್‌ಸಿ ಆರಂಭಿಸಲು ಪೂರಕವಾಗಿ ನೀತಿ, ನಿಯಮಗಳಲ್ಲಿ ಬದ
ಲಾವಣೆ ತರಲಾಗುವುದು’ ಎಂದರು.

‘ರಾಜ್ಯದಲ್ಲಿ 2,300ಕ್ಕೂ ಹೆಚ್ಚು ಪಿಎಚ್‌ಸಿಗಳಿವೆ. 30 ಸಾವಿರ ಜನರಿಗೆ ಒಂದು ಪಿಎಚ್‌ಸಿ ಇರಬೇಕೆಂಬ ನಿಯಮ
ವಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಈ ನಿಯಮದಂತೆ ಇಲ್ಲ. ಮೂರು ವರ್ಷಗಳಲ್ಲಿ ಹೊಸ ಪಿಎಚ್‌ಸಿಗಳನ್ನು ಆರಂಭಿಸಲಾಗುವುದು’ ಎಂದರು.

‘ಯಾವುದೇ ಆಸ್ಪತ್ರೆಗಳಲ್ಲಿ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಅದಕ್ಕಾಗಿ ಸಮಗ್ರವಾದ ಹೊಸ ನೀತಿ ರೂಪಿಸಲಾಗುತ್ತಿದೆ. ಕೆಲವು ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕರ್ತವ್ಯ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಕರ್ತವ್ಯ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಬಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಹೊಸ ನೀತಿಯಲ್ಲಿ ಸೇರಿಸಲಾಗುವುದು’ ಎಂದು ವಿವರಿಸಿದರು.

‘1,250 ಎಂಬಿಬಿಎಸ್ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. 1,500 ಹಿರಿಯ ರೆಸಿಡೆಂಟ್ ವೈದ್ಯರನ್ನೂ ನೇಮಿಸಲಾಗುವುದು. ಡಿಸೆಂಬರ್ ಅಥವಾ ಜನವರಿ ವೇಳೆಗೆ ಎಲ್ಲ ಪಿಎಚ್‌ಸಿಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್ ಸಿಬ್ಬಂದಿ ಹುದ್ದೆಗಳನ್ನು ಕೂಡಾ ಭರ್ತಿ ಮಾಡಲಾಗುವುದು. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.