ಬೆಂಗಳೂರು: ‘ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಮತ್ತು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಆ ಭಾಗದಲ್ಲೇ ನೇಮಕಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸೂಕ್ತ ತಿದ್ದುಪಡಿ ತರಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ಬಸವರಾಜ ಪಾಟೀಲ ಇಟಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಶಿಕ್ಷಕರ ಹುದ್ದೆಗಳಿಗೆ ಮೂರು ವರ್ಷಗಳಿಂದ ನೇಮಕಾತಿ ನಡೆಸಲಾಗುತ್ತಿದೆ. ಆದರೆ, ನಿರೀಕ್ಷಿತ ಸಂಖ್ಯೆಯಲ್ಲಿ ಅರ್ಹ ಶಿಕ್ಷಕರು ಸಿಗುತ್ತಿಲ್ಲ. ಕಳೆದ ವರ್ಷ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕೇವಲ 3 ಸಾವಿರ ಶಿಕ್ಷಕರು ನೇಮಕಾತಿಗೆ ಅರ್ಹತೆ ಪಡೆದಿದ್ದರು. ಪ್ರತಿವರ್ಷ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಯೋಚನೆಯಿದೆ’ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಇಟಗಿ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕ ಹೊಂದಿ, ಒಂದೆರಡು ವರ್ಷ ಸೇವೆ ಸಲ್ಲಿಸಿದ ಬಳಿಕ ಅನಾರೋಗ್ಯ ಅಥವಾ ಬೇರೆ ಕಾರಣ ನೀಡಿ ತಮ್ಮ ಜಿಲ್ಲೆಗೆ ವರ್ಗಾವಣೆ ಪಡೆದುಕೊಳ್ಳುತ್ತಾರೆ. ಈ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಇದನ್ನು ತಪ್ಪಿಸಬೇಕು’ ಎಂದು ಆಗ್ರಹಿಸಿದರು.

ಅದಕ್ಕೆ ಸುರೇಶ್ ಕುಮಾರ್, ‘ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ ಆ ಭಾಗದ ಅಭ್ಯರ್ಥಿಗಳೇ ನೇಮಕವಾದರೆ ವರ್ಗಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದರು.

‘ಆರ್ಥಿಕ ಮಿತವ್ಯಯ ನೇಮಕಾತಿಗೆ ಅಡ್ಡಿ’
ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಸುರೇಶ್ ಕುಮಾರ್, ‘ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಉದ್ದೇಶದಿಂದ ನೇಮಕಾತಿಗಳಿಗೆ ಆರ್ಥಿಕ ಇಲಾಖೆ ನಿರ್ಬಂಧ ವಿಧಿಸಿದೆ. ಈ ನಿರ್ಬಂಧ ಸಡಿಲಗೊಂಡ ನಂತರ ಸಿಬ್ಬಂದಿ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.