ಮಂಗಳವಾರ, ಸೆಪ್ಟೆಂಬರ್ 21, 2021
29 °C

ಡ್ರಗ್ಸ್ ಪ್ರಕರಣ ತಾರ್ಕಿಕ ಅಂತ್ಯಕ್ಕೆ: ಸಚಿವ ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ದೊಡ್ಡ ದೊಡ್ಡ ಶಾಲೆಗಳಲ್ಲಿ ಓದುವ ಶ್ರೀಮಂತ ಮಕ್ಕಳನ್ನು ಡ್ರಗ್ಸ್ ಜಾಲಕ್ಕೆ ಸೆಳೆಯಲು ಐಸ್ ಕ್ರೀಮ್‌ಗೆ ಮಾದಕ ವಸ್ತುಗಳನ್ನು ಸವರಿ ಕೊಡಲಾಗುತ್ತದೆ ಎಂಬ ಅನುಮಾನ ಇದೆ. ಯುವ ಜನತೆಯನ್ನು ಹಾಳು ಮಾಡುತ್ತಿರುವರನ್ನು ಹಿಡಿದು ಜೈಲಿಗೆ ಕಳುಹಿಸುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ಡ್ರಗ್ಸ್ ವಿಚಾರವಾಗಿ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಮಾದಕ ವಸ್ತುಗಳು ಸಮಾಜ ಹಾಗೂ ಯುವ ಜನಾಂಗವನ್ನು ದುರ್ಬಲ ಮಾಡುತ್ತವೆ. ಇದನ್ನು ಬೇರು ಸಮೇತವಾಗಿ ಕಿತ್ತು ಹಾಕಬೇಕು’ ಎಂದು ಹೇಳಿದರು.

‘ಮೂರು ವರ್ಷಗಳ ಹಿಂದೆಯೇ ಈ ಬಗ್ಗೆ ಬಿಜೆಪಿ ಧ್ವನಿ ಎತ್ತಿದೆ. ಡ್ರಗ್ಸ್ ಪ್ರಕರಣವನ್ನು ರಾಜ್ಯ ಸರ್ಕಾರ ತಾರ್ಕಿಕ ಅಂತ್ಯಕ್ಕೆ‌ ತಲುಪಿಸಲಿದೆ’ ಎಂದು ಸುರೇಶ್ ಕುಮಾರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು