ಬೆಂಗಳೂರು: ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಅವರು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, ‘ಶಾಲಾ–ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಶಾಸಕರು, ಸಂಸದರು ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

‘ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ...ಶಾಲೆ ಆರಂಭಕ್ಕೆ ಇಲಾಖೆ ಸಿದ್ಧತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.