ಬಿಸಿಯೂಟಕ್ಕೆ ಕೇಂದ್ರದ ಅನುಮತಿ ಸಿಕ್ಕಿಲ್ಲ: ಸಚಿವ ಸುರೇಶ್ ಕುಮಾರ್

ಮಂಗಳೂರು: ‘ಬಿಸಿಯೂಟ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಸಮ್ಮತಿ ದೊರೆತಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ನಗರದ ಪುರಭವನದಲ್ಲಿ ಶನಿವಾರ ಮುಖ್ಯ ಶಿಕ್ಷಕರೊಂದಿಗೆ ಸಚಿವರ ಸಂವಾದ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.
‘1ನೇ ತರಗತಿಯಿಂದಲೇ ಶಾಲೆ ಆರಂಭಿಸಲು ಇಲಾಖೆಯು ಸಿದ್ಧತೆ ನಡೆಸಿದೆ. ಆದರೆ, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸಮ್ಮತಿ ದೊರೆತಿಲ್ಲ’ ಎಂದ ಅವರು, ‘ಇನ್ನೆರಡು ದಿನಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.
ಆ್ಯಪ್: ‘ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಯು ಆ್ಯಪ್ ಹೊರತರಲಿದೆ. ಬಳಿಕ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಉಪ ನಿರ್ದೇಶಕರ ಕಚೇರಿಗಳಿಗೆ ಅಲೆದಾಡಬೇಕಾಗಿಲ್ಲ’ ಎಂದರು.
‘ಕೆಲವು ಅಧಿಕಾರಿಗಳ ಕಚೇರಿಗಳಲ್ಲಿ ಕಡತಗಳು ವಿನಾಕಾರಣ ಬಾಕಿ ಉಳಿದಿರುವ ಬಗ್ಗೆ ದೂರುಗಳಿದ್ದು, ಪರಿಶೀಲನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷೆಗೆ ಗುರಿ ಮಾಡಲಾಗುವುದು. ಶೀಘ್ರವೇ ಬೆಳಗಾವಿಯಿಂದ ಆರಂಭಿಸಿ, ವಿಭಾಗೀಯ ಮಟ್ಟದಲ್ಲಿ ಕಡತ ವಿಲೇವಾರಿ ಅದಾಲತ್ ನಡೆಸುತ್ತೇವೆ’ ಎಂದು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.