ಶುಕ್ರವಾರ, ಮೇ 20, 2022
24 °C

ಸಚಿವ ಸುರೇಶ್‌ಕುಮಾರ್ ಹೆಸರಿನಲ್ಲಿ ನಕಲಿ ಖಾತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಸಂಬಂಧ ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ನಕಲಿ ಖಾತೆ ತೆರೆದು ಸಾರ್ವಜನಿಕರ ಬಳಿ ಹಣ ಕೇಳುತ್ತಿರುವ ಬಗ್ಗೆ ಸಚಿವರ ಆಪ್ತ ಕಾರ್ಯದರ್ಶಿ ಪಿ.ಎಂ. ಚಿದಂಬರ ದೂರು ನೀಡಿದ್ದಾರೆ. ಅದರನ್ವಯ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೊರ ರಾಜ್ಯದ ಸೈಬರ್ ವಂಚಕರು ಕೃತ್ಯ ಎಸಗಿರುವ ಸಾಧ್ಯತೆ ಇದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಸುರೇಶ್‌ಕುಮಾರ್ ಅವರ ಫೋಟೊವನ್ನು ಬಳಸಿಕೊಂಡು ‘ನಿಮ್ಮ ಸುರೇಶ್‌’ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಅದರ ಮೂಲಕ ಹಲವರಿಗೆ ಫ್ರೇಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಸ್ವೀಕರಿಸಿರುವ ವ್ಯಕ್ತಿಗಳ ಜೊತೆ ಚಾಟಿಂಗ್ ಮಾಡುತ್ತಿರುವ ವಂಚಕರು, ‘ಸಂಕಷ್ಟದಲ್ಲಿದ್ದೇನೆ. ತುರ್ತಾಗಿ ಹಣ ಬೇಕಿದೆ. ನನ್ನ ಫೋನ್‌–ಪೇ ಹಾಗೂ ಗೂಗಲ್‌ ಪೇಗೆ ಹಣ ವರ್ಗಾವಣೆ ಮಾಡಿ’ ಎಂದು ಮೊಬೈಲ್ ನಂಬರ್ ಸಹಿತ ಸಂದೇಶ ಕಳುಹಿಸುತ್ತಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು