ಗುರುವಾರ , ಅಕ್ಟೋಬರ್ 22, 2020
22 °C

ವಾರದೊಳಗೆ ಶಿಕ್ಷಕರ ಬಡ್ತಿ ಮುಗಿಸಲು ಸಚಿವರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪ್ರಾಥಮಿಕ ಶಾಲಾ ಶಿಕ್ಷಕ ವೃಂದದಿಂದ ಪ್ರೌಢಶಾಲಾ ಶಿಕ್ಷಕ ಹುದ್ದೆಗೆ ಬಡ್ತಿ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಮುಗಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್ ಸೂಚಿಸಿದ್ದಾರೆ.

‘ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪದೋನ್ನತಿ ನೀಡಲಾಗಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಈ ಮಧ್ಯೆ, ಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಇದರಿಂದ ತೊಂದರೆಗೆ ಒಳಗಾದ ಈ ಜಿಲ್ಲೆಗಳ ಶಿಕ್ಷಕರ ಮನವಿಯನ್ನು ಪರಿಗಣಿಸಿ, ತಡೆಹಿಡಿದಿರುವ ಬಡ್ತಿ ಪ್ರಕ್ರಿಯೆಗೆ ಅನುಮತಿ ನೀಡಲಾಗಿದೆ’ ಎಂದೂ ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು