ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26 ಜಿಲ್ಲೆಗಳಲ್ಲಿ ಸಚಿವರಿಂದ ಧ್ವಜಾರೋಹಣ

Last Updated 25 ಜನವರಿ 2023, 15:57 IST
ಅಕ್ಷರ ಗಾತ್ರ

ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಗುರುವಾರ ನಡೆಯುವ ಸಮಾರಂಭಗಳಲ್ಲಿ ಧ್ವಜಾರೋಹಣ ನೆರವೇರಿಸಲು ರಾಜ್ಯದ 26 ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಮತ್ತು ನಾಲ್ಕು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಧ್ವಜಾರೋಹಣ ನೆರವೇರಿಸಲಿದ್ದಾರೆ. ಉಳಿದ 30 ಜಿಲ್ಲೆಗಳಲ್ಲಿ ಸಚಿವರು ಹಾಗೂ ಅಧಿಕಾರಿಗಳನ್ನು ನಿಯೋಜಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಮಂಡ್ಯದಲ್ಲಿ ನೂತನವಾಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಕಂದಾಯ ಸಚಿವ ಆರ್‌. ಅಶೋಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿಜಯಪುರ, ಬೀದರ್‌, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಅನಾರೋಗ್ಯ ಅಥವಾ ಇತರ ಕಾರಣಗಳಿಂದ ಸಚಿವರು ಕಾರ್ಯಕ್ರಮಕ್ಕೆ ಗೈರಾದರೆ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ನಡೆಸಬೇಕು ಎಂದೂ ನಿರ್ದೇಶನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT